ಬೆಂಗಳೂರು: ವಿವಿಧ ಅಕಾಡೆಮಿಗಳ ಅಧ್ಯಕ್ಷರ ಹಾಗೂ ಸದಸ್ಯರ ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ವಿದ್ವಾಂಸರಾದ ಡಾ.ಪುರುಷೋತ್ತಮ ಬಿಳಿಮಲೆ ಆಯ್ಕೆಯಾಗಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ,
ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಕೃಪಾ ಫಡ್ಕೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ

ಸದಾನಂದ ಮಾವಜಿ
ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್,ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎಲ್.ಎನ್. ಮುಕುಂದರಾಜ್ ಆಯ್ಕೆಯಾಗಿದ್ದಾರೆ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಚನ್ನಪ್ಪ ಕಟ್ಟಿ, ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಾನಸ ನೇಮಕಗೊಂಡಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ

ಡಾ.ಕೃಪಾ ಫಡ್ಕೆ
ಅಧ್ಯಕ್ಷರಾಗಿ ಡಾ. ಕೆ.ವಿ.ನಾಗರಾಜ ಮೂರ್ತಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾಗಿ ಎಂ.ಸಿ.ರಮೇಶ್, ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿ ಡಾ. ಪ.ಸ.ಕುಮಾರ್, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಶಿವಪ್ರಸಾದ್ ಗೊಲ್ಲಹಳ್ಳಿ,ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜೊಕಿಂ ಸ್ಟ್ಯಾನ್ಲಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯು.ಎಚ್. ನೇಮಕಗೊಂಡಿದ್ದಾರೆ.

ತಾರಾನಾಥ್ ಗಟ್ಟಿ ಕಾಪಿಕಾಡ್,
ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿ ಪ್ರೊ.ದುರ್ಗಾದಾಸ್, ಕರ್ನಾಟಕ ಬಂಜಾರ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎ.ಆರ್. ಗೋವಿಂದಸ್ವಾಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಅಜ್ಜಿನಕೊಂಡ ಮಹೇಶ ನಾಚಯ್ಯ ನೇಮಕವಾಗಿದ್ದಾರೆ.









