ಸುಳ್ಯ:ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಪ್ರಕರಣವೊಂದರಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಅರೊಪಿಯನ್ನು ಕೆಲವು ದಿನಗಳ
ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಪರಾರಿಯಾಗಿದ್ದ. ಈತನ ಪತ್ತೆಗೆ ವ್ಯಾಪಕ ಬಲೆ ಬೀಸಿದ್ದ ಪೊಲೀಸರು ಸತ್ಯಮಂಗಲ ಎಂಬಲ್ಲಿಂದ ಬಂಧಿಸಿ ಸುಳ್ಯಕ್ಕೆ ಕರೆ ತರಲಾಗಿದೆ ಎಂದು ತಿಳಿದು ಬಂದಿದೆ.ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ಈತನನನ್ನು ಪೋಲೀಸರು ಬಂಧಿಸಿ ತಂದಿದ್ದಾಗ ಈತ ತಪ್ಪಿಸಿಕೊಂಡಿದ್ದ.