ಕಡಬ:ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು. ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದ್ದು ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.
ಆ್ಯಸಿಡ್ ಎರಚಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡಿರುವ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಸಿಡ್ ಎರಚಿದ
ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರು ನಿವಾಸಿ ಅಬಿನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಸಮಗ್ರ ತನಿಖೆಗೆ ಬಿಜೆಪಿ ಒತ್ತಾಯ:
ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಆಸಿಡ್ ಎರಚಿರುವ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಘಟನೆಯಿಂದ ಸಾರ್ವಜನಿಕರು ಭಯಬಿತರಾಗಿದ್ದರೆ,ಆರೋಪಿಯ ಬಗ್ಗೆ ಮತ್ತು ಘಟನೆಯ ಬಗ್ಗೆ ಬಗ್ಗೆ ಸಮಗ್ರ ತನಿಖೆಯಾಗಬೇಕು, ಪೊಲೀಸ್ ಇಲಾಖೆ ಈ ವಿಚಾರದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಈ ರೀತಿ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ವೆಂಕಟ್ ವಳಲಂಬೆಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.