ಮಂಗಳೂರು: ಗುಡ್ಡ ಕುಸಿತದಿಂದಾಗಿ ಕರಾವಳಿಯನ್ನು ಬೆಂಗಳೂರಿನೊಂದಿಗೆ ಸಂಪರ್ಕಿಸುವ ಎರಡು ಮುಖ್ಯ ರಾಷ್ಟೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈರುತ್ಯ ರೈಲ್ವೆ ಕ್ರಮ ಕೈಗೊಂಡಿದೆ.06547 ಸಂಖ್ಯೆಯ ರೈಲು ಯಶವಂತಪುರದಿಂದ ಇಂದು (ಶುಕ್ರವಾರ) ಹೊರಡಲಿದ್ದು, 06548 ಸಂಖ್ಯೆಯ ರೈಲು ಮಂಗಳೂರು ಜಂಕ್ಷನ್ನಿಂದ
ಶನಿವಾರ ಹೊರಡಲಿದೆ. 06549 ಸಂಖ್ಯೆಯ ರೈಲು ಇದೇ 21 ಮತ್ತು 22ರಂದು ಯಶವಂತಪುರರಿಂದ ಮಂಗಳೂರು ಜಂಕ್ಷನ್ಗೆ ಹೊರಡಲಿದ್ದು, 06550 ಸಂಖ್ಯೆಯ ರೈಲು 21 ಮತ್ತು 22ರಂದು ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ಹೊರಡಲಿದೆ.ತಲಾ ಎರಡು ಸ್ಲೀಪರ್ ಕೋಚ್ಗಳು ಸೇರಿದಂತೆ ಈ ಎಲ್ಲ ರೈಲುಗಳಲ್ಲಿ ಒಟ್ಟು 18 ಕೋಚ್ಗಳು ಇರುತ್ತವೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ಮಂಗಳೂರು-ಬೆಂಗಳೂರು ನಡುವೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮತ್ತು ಮೈಸೂರು ವಿಭಾಗದ ವ್ಯವಸ್ಥಾಪಕರಿಗೆ ಶುಕ್ರವಾರ ಬೆಳಿಗ್ಗೆ ಪತ್ರ ಬರೆದಿದ್ದರು.
ಮಂಗಳೂರು- ಬೆಂಗಳೂರು ನಗರಗಳ ನಡುವೆ ಪ್ರತಿನಿತ್ಯ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯವಿದೆ. ಶೀಘ್ರದಲ್ಲಿ ಹೆಚ್ಚುವರಿ ರೈಲು ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಚೌಟ ವಿನಂತಿಸಿದ್ದರು.