ಸುಳ್ಯ:ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಮ್ಮ ಆಚರಣೆ, ಸಂಪ್ರದಾಯಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಆಟಿ ಕೂಟದಂತಹಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದ್ದಾರೆ.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಇವುಗಳ
ಸಂಯುಕ್ತ ಆಶ್ರಯದಲ್ಲಿಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ನಡೆದ ಅರೆಭಾಷೆ ಜಂಬರ ಆಟಿಕೂಟ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಗತಿಪರ ಕೃಷಿಕ ಎ.ಆರ್.ಗಂಗಾಧರ ಗೌಡ ಅಡ್ಕಾರು ಜಂಬರಕ್ಕೆ ಚಾಲನೆ ನೀಡಿದರು.ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಸಾವಿತ್ರಿ ಅಡ್ಕಾರು, ದೇವಸ್ಥಾನದ ಮೊಕ್ತೆಸರ ಗುರುರಾಜ್ ಭಟ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಕಾರ್ಯಕ್ರಮದ ಸಂಚಾಲಕ, ಅರೆಭಾಷೆ ಅಕಾಡೆಮಿ ಸದಸ್ಯ ಡಾ. ಜ್ಞಾನೇಶ್ ಎನ್. ಎ., ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು,ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಿಜಯಕುಮಾರ್ ನರಿಯೂರು, ಪುರುಷೋತ್ತಮ ನಂಗಾರು, ಹೇಮಚಂದ್ರ ಕುತ್ಯಾಳ, ವಿನೋದ್ ಮಹಾಬಲಡ್ಕ, ಸುಮತಿ ಹುಲಿಮನೆ, ಸೌಮ್ಯ ಬೈತಡ್ಕ, ಭಾರತಿ ಕೋನಡ್ಕ ಉಪಸ್ಥಿತರಿದ್ದರು.ಯಜ್ಞೇಶ್ ಕಾಳಮ್ಮನೆ ಪ್ರಾರ್ಥಿಸಿ, ಹರಿಪ್ರಕಾಶ್ ಅಡ್ಕಾರು ಸ್ವಾಗತಿಸಿ, ಲೋಕನಾಥ್ ಮಾಸ್ಟರ್ ವಂದಿಸಿದರು. ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಿತು.





