ಸುಳ್ಯ:’ಬ್ಯಾಂಕ್ ಆಫ್ ಬರೋಡದಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಗ್ರಾಮ ಪಂಚಾಯತ್ ಜಾಲ್ಸೂರು, ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟ ಜಾಲ್ಸೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇವುಗಳ ಜಂಟಿ ಆಶ್ರಯದಲ್ಲಿ ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿಯವರು ಸಂಜೀವಿನಿ ಒಕ್ಕೂಟಕ್ಕೆ ಕೊಡಮಾಡಿದ
ಹೊಲಿಗೆ ಯಂತ್ರ ವಿತರಣೆ ಮತ್ತು ಹೊಲಿಗೆ ತರಬೇತಿಗೆ ಚಾಲನೆ ಹಾಗೂ ಬ್ಯಾಂಕಿಂಗ್ ವ್ಯವಹಾರಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಅಡ್ಕಾರು ಸಂಜೀವಿನಿ ಒಕ್ಕೂಟದ ಸಭಾಂಗಣದಲ್ಲಿ ನಡೆಯಿತು.ಜಾಲ್ಸೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ತಿರುಮಲೇಶ್ವರಿ ಅರ್ಭಡ್ಕ ಅಧ್ಯಕ್ಷತೆ ವಹಿಸಿದ್ದರು.
ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಹೊಲಿಗೆ ಯಂತ್ರ ವಿತರಿಸಿದರು.
ಬ್ಯಾಂಕ್ ಆಫ್ ಬರೋಡ ಸುಳ್ಯ ಶಾಖೆಯ ಹಿರಿಯ ವ್ಯವಸ್ಥಾಪಕ
ಸರವಣ ಸೆಲ್ವ ಮತ್ತು ಹೆಡ್ ಕ್ಯಾಶಿಯರ್ ಸುಪ್ರೀತಾ
ಬ್ಯಾಂಕಿಂಗ್ ವ್ಯವಹಾರಗಳ ಬಗ್ಗೆ ಮಾಹಿತಿ ನೀಡಿದರು.ಜಾಲ್ಸೂರು ಸಮುದಾಯ ಆರೋಗ್ಯ ಅಧಿಕಾರಿ ರಚನಾ ಆರೋಗ್ಯ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಸಂಜೀವಿನಿ ಒಕ್ಕೂಟದ ವ್ಯವಸ್ಥಾಪಕಿ ಶ್ವೇತಾ, ಜಾಲ್ಸುರಿನ ಗ್ರಾಮ ಪಂಚಾಯಿತಿ ಸಿಬ್ಬಂದಿ ಚಿದಾನಂದ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವೇದಾ ಶೆಟ್ಟಿ ಬೊಳುಬೈಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಅವರನ್ನು ಸಂಜೀವಿನಿ ಒಕ್ಕೂಟದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಶಾಂತಾ ಡಿ. ಎನ್. ಪ್ರಾರ್ಥಿಸಿದರು. ಕಾರ್ಯಕ್ರಮ ಸಂಯೋಜಕಿ ವಿಜಯ ಗಂಗಾಧರ ಕಾಳಮ್ಮನೆ ವಂದಿಸಿದರು. ಎಂಬಿಕೆ ಸೌಮ್ಯ ಕದಿಕಡ್ಕ ಕಾರ್ಯಕ್ರಮ ನಿರೂಪಿಸಿದರು.