ಸುಳ್ಯ: ಹಿರಿಯ ಕಾಂಗ್ರೆಸ್ ಮುಖಂಡ, ದ.ಕ.ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ. ಕೊಯನಾಡು ಸಮೀಪ ಅಡ್ಪಂಗಾಯ ಅವರ ಕಾರು ಮತ್ತು ಮಿನಿ ಗೂಡ್ಸ್ ಟೆಂಪೋ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ

ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಕಾರಿನ ಮುಂಭಾಗ ಜಖಂಗೊಂಡಿದೆ. ಧನಂಜಯ ಅಡ್ಪಂಗಾಯ ಅವರು ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸುಳ್ಯದಿಂದ ಕೊಡಗು ಕಡೆಗೆ ಗೂಡ್ಸ್ ಗಾಡಿ ಹೋಗುತ್ತಿತ್ತು ಎನ್ನಲಾಗಿದೆ. ಅಪಘಾತದ ರಭಸಕ್ಕೆ ಮಿನಿ ಗೂಡ್ಸ್ ವಾಹನ ಮಗುಚಿ ಬಿದ್ದಿದೆ