ಸುಳ್ಯ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಪರವಾಗಿ ಬಿರುಸಿನ ಚುನಾವಣಾ ಪ್ರಚಾರ ನಡೆಸಲಾಯಿತು. ಸತತ ಮೂರನೇ ದಿನವೂ ಅಡ್ಪಂಗಾಯ ನೇತೃತ್ವದಲ್ಲಿ ಸುಳ್ಯ ನಗರದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.ಮಿಲಿಟರಿ ಗ್ರೌಂಡ್, ಜಯನಗರ, ಬೆಟ್ಟಂಪಾಡಿ, ಮೊಗರ್ಪಣೆ, ಕಾನತ್ತಿಲ, ಜ್ಯೋತಿ ಸರ್ಕಲ್ ಮತ್ತಿತರ ಭಾಗಗಳಲ್ಲಿ ಮನೆ ಮನೆ ಭೇಟಿ ನೀಡಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿ ಚುನಾವಣಾ ಪ್ರಚಾರ ನಡೆಸಿ ಜಿ.ಕೃಷ್ಣಪ್ಪ ಅವರ ಪರವಾಗಿ ಮತ ಯಾಚನೆ ಮಾಡಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.