ಸುಳ್ಯ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಟಿಕೆಟ್ ಬಯಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅವರು ಇಂದು ಅರ್ಜಿ ಸಲ್ಲಿಸಿದ್ದಾರೆ. ಧನಂಜಯ ಅಡ್ಪಂಗಾಯ ಅವರ ಹೆಸರು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರೇಸ್‌ನಲ್ಲಿ ಈ ಹಿಂದೆ ಹಲವು ಬಾರಿ ಕೇಳಿ ಬಂದಿತ್ತು.1999 ಮತ್ತು 2004ರಲ್ಲಿ ಧನಂಜಯ ಅಡ್ಪಂಗಾಯ ಅವರ ಹೆಸರು ಅಂತಿಮ ಸುತ್ತಿಗೆ ತಲುಪಿ ಅಂಗೀಕಾರಗೊಂಡಿದ್ದರೂ ಕೊನೆಯ ಕ್ಷಣದಲ್ಲಿ ತಪ್ಪಿ ಹೋಗಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಧನಂಜಯ ಅಡ್ಪಂಗಾಯ ಅವರು ಕೆಪಿಸಿಸಿಯ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು. ಕಾಂಗ್ರೆಸ್ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಚರಾಗಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.