ಸುಳ್ಯ:ಅರಂತೋಡು- ಎಲಿಮಲೆ ರಸ್ತೆ ಅಭಿವೃದ್ಧಿ ಪೂರ್ತಿ ಮಾಡಬೇಕು ಎಂದು ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅಡ್ತಲೆವರೆಗಿನ ಅಗಲೀಕರಣ ಗೊಂಡ ರಸ್ತೆಯ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳನ್ನು ಹಾಗೂ ಮರಗಳನ್ನು ತೆರವು ಮಾಡಬೇಕು, 3 ಕಿ ಮೀ ರಸ್ತೆಗೆ ಉಳಿದ ಎರಡನೇ ಕೋಟ್ ಡಾಮರಿಕರಣ ಮಾಡಲು ಸೂಚನೆ ನೀಡಬೇಕು. ಪಿಂಡಿಮನೆಯಿಂದ ಅಡ್ತಲೆ ರಸ್ತೆಯನ್ನು ಅಗಲೀಕರಣ ಮಾಡಲು
ಸೂಕ್ತ ಅನುದಾನ ಒದಗಿಸಬೇಕು ಎಂದು ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ ಹಾಗೂ ಕಾರ್ಯದರ್ಶಿ ರಂಜಿತ್ ಅಡ್ತಲೆ ಶಾಸಕರಿಗೆ ಮನವಿ ಮಾಡಿದ್ದಾರೆ.
ಮನವಿಗೆ ಸ್ಪಂದಿಸಿದ ಶಾಸಕರು ಹಾಗೂ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಕರೆಯಿಸಿ , ಜನವರಿ 15ರ ಒಳಗೆ ಎರಡನೇ ಕೋಟ್ ಡಾಮರೀಕರಣ ಪ್ರಾರಂಭ ಮಾಡಲು ಹಾಗೂ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವು ಮಾಡಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪಿಂಡಿಮನೆಯಿಂದ ಅಡ್ತಲೆ ತನಕ ರಸ್ತೆಯನ್ನು ಅಗಲೀಕರಣಗೊಳಿಸಲು ಆದಷ್ಟು ಬೇಗ ಸೂಕ್ತ ಅನುದಾನ ನೀಡಲು ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು. ಈ ಸಂದರ್ಭ ಬಿ ಜೆ ಪಿ ಪ್ರಮುಖರಾದ ಸಂತೋಷ್ ಕುತ್ತಮೊಟ್ಟೆ ಅವರು ಉಪಸ್ಥಿತರಿದ್ದರು.