ಚೆನ್ನೈ:ಏಕದಿನ ವಿಶ್ವಕಪ್ ಕ್ರಿಕೆಟ್ನಲ್ಲಿ ಪಾಕಿಸ್ತಾನದ ವಿರುದ್ಧ ಅಫ್ಘಾನಿಸ್ತಾನ ತಂಡ 8 ವಿಕೆಟ್ಗಳ ಐತಿಹಾಸಿಕ ಗೆಲುವು ದಾಖಲಿಸಿದೆ.ಇಂಗ್ಲೆಂಡ್ ತಂಡದ ವಿರುದ್ಧ ಗೆಲುವು ದಾಖಲಿಸಿದ್ದ ಅಫ್ಘಾನಿಸ್ತಾನ ಈ ವಿಶ್ವಕಪ್ನಲ್ಲಿ ಮತ್ತೊಂದು ಅಚ್ಚರಿಯ ಗೆಲುವು ಪಡೆದಿದೆ. ಇಂದಿನ ಪಂದ್ಯದಲ್ಲಿ
ಟಾಸ್ ಗೆದ್ದ ಪಾಕ್ ತಂಡದ ನಾಯಕ ಬಾಬರ್ ಆಝಂ ಬ್ಯಾಟಿಂಗ್ ಆಯ್ದುಕೊಂಡು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 282 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ 49 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕಡ 286 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಅಫ್ಘಾನಿಸ್ತಾನ್ ತಂಡಕ್ಕೆ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಮೊದಲ ವಿಕೆಟ್ಗೆ 130 ರನ್ಗಳ ಭರ್ಜರಿ ಆರಂಭ ಒದಗಿಸಿದ್ದರು. ಗುರ್ಬಾಝ್ 65, ಇಬ್ರಾಹಿಂ ಝದ್ರಾನ್ 87 ರನ್, ರಹಮತ್ ಶಾ ಅಜೇಯ 77, ಹಶ್ಮತ್ ಶಾಹಿದಿ ಅಜೇಯ 48 ರನ್ ಗಳಿಸಿ ತಂಡಕ್ಕೆ ಐತಿಹಾಸಿಕ ಗೆಲುವು ದಾಖಲಿಸಲು ನೆರವಾದರು. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಪಾಕಿಸ್ತಾನ ವಿರುದ್ಧ ಅಫ್ಘಾನಿಸ್ತಾನ ಪ್ರಥಮ ಬಾರಿಗೆ ಗೆಲುವು ದಾಖಲಿಸಿದೆ.
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 282 ರನ್ ಗಳಿಸಿತು. ಪಾಕ್ ಪರ ನಾಯಕ ಬಾಬರ್ ಅಝಂ (74) ಆಅಬ್ದುಲ್ಲ ಶಫೀಕ್(58) ಅರ್ಧ ಶತಕ ಭಾರಿಸಿದರು. ಇಫ್ತಿಕರ್ ಅಹ್ಮದ್ ಹಾಗೂ ಶಾದಾಬ್ ಖಾನ್ ತಲಾ 40 ರನ್ ಗಳಿಸಿದರು. ಅಪಘಾನ್ ಪರ ನೂರ್ ಅಹಮ್ಮದ್ 3 ಹಾಗೂ ನವೀನ್-ಉಲ್-ಹಕ್ ವಿಕೆಟ್ ಪಡೆದರು.