ಸುಳ್ಯ: ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಸುಳ್ಯ ಪೊಲೀಸ್ ಠಾಣೆಯ ವತಿಯಿಂದ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ಜೂ.26 ರಂದು ನಡೆಯಿತು. ಸುಳ್ಯ ಠಾಣಾ ವ್ಯಾಪ್ತಿಯ
ನೆಹರು ಸ್ಮಾರಕ ಮಹಾ ವಿದ್ಯಾಲಯ, ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಗಾಂಧಿನಗರ ಇಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಈರಯ್ಯ ದೂಂತೂರು ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.
ಮಾದಕ ವಸ್ತುಗಳ ಉಪಯೋಗ ಮತ್ತು ಅಕ್ರಮ ಸಾಗಾಣೆ ವಿರುದ್ಧ ಯುವ ಜನರಲ್ಲಿ ಜಾಗೃತಿ ಅತೀ ಅಗತ್ಯ. ಗ್ರಾಮೀಣ ಭಾಗಕ್ಕೂ ಆವರಿಸುತ್ತಿರುವ ಮಾದಕ ದ್ರವ್ಯಗಳನ್ನು ತಡೆಯಲು ಎಲ್ಲರೂ ಕೈ ಜೋಡಿಸಬೇಕು ಮತ್ತು ಜಾಗೃತರಾಗಿ ಇದರ ವಿರುದ್ಧ ಹೋರಾಟ ನಡೆಸಬೇಕು ಎಂದು ಅವರು ಹೇಳಿದರು.
ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ, ಉಪನ್ಯಾಸಕರಾದ ಪ್ರೊ.ರತ್ನಾವತಿ ಉಪಸ್ಥಿತರಿದ್ದರು.