ಸುಳ್ಯ:ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ಸೇನೆ ಮತ್ತು ಅಗ್ನಿಪಥ್ ವೃತ್ತಿ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾರತೀಯ
ಸೇನೆಯ ನಿವೃತ್ತ ಅಧಿಕಾರಿ ಕ್ಯಾಪ್ಟನ್ ಸದಾನಂದ ಪೆರುವಾಜೆ ಆಗಮಿಸಿ ಅಗ್ನಿಪಥ್ ವೃತ್ತಿ ಅವಕಾಶಗಳ ಮತ್ತು ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ ಜಯಶ್ರೀ ಆಂತರಿಕ ಗುಣಮಟ್ಟ ಕೋಶ ಮತ್ತು ಉದ್ಯೋಗ ಮಾಹಿತಿ ಕೋಶ ಇದರ ಸಂಚಾಲಕರಾದ ಗೀತಾ ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿನಿ ಮಾದರ್ಯ ಎನ್ ಉಡುಪ ಸ್ವಾಗತಿಸಿದರು ಮೇಘನ ಡಿ.ಕೆ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಅನುಷ್ ಕೆ.ಎಂ ವಂದಿಸದರು. ಅಭಿಷೇಕ್ ಕೆ.ಸಿ ಕಾರ್ಯಕ್ರಮ ನಿರೂಪಿಸಿದರು.