ಸುಳ್ಯ:ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರಾದ ಅಹಮ್ಮದ್ ದೇವರಕೋವಿಲ್
ಅವರು ಜು.23ರಂದು ಸುಳ್ಯ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಪೂ.8.30ಕ್ಕೆ ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನಕ್ಕೆ ಆಗಮಿಸುವ ಅವರು 9.15ಕ್ಕೆ ಪೇರಡ್ಕದ
ಮುಹಿಯುದ್ದೀನ್ ಜುಮ್ಮಾ ಮಸೀದಿಗೆ ಭೇಟಿ ನೀಡಲಿದ್ದಾರೆ. 10 ಗಂಟೆಯಿಂದ ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಉದ್ಘಾಟಿಸುವ ಅಹಮ್ಮದ್ ದೇವರಕೋವಿಲ್ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ತೆಕ್ಕಿಲ್ ಮಹಮ್ಮದ್ ಹಾಜಿ ಅವರ 50ನೇ ಪುಣ್ಯ ಸ್ಮರಣೆ ಪ್ರಯುಕ್ತ ಪ್ರತಿಷ್ಠಾನದ ವತಿಯಿಂದ ಒಂದು ವರ್ಷದಲ್ಲಿ ಹಮ್ಮಿಕೊಳ್ಳುವ 50 ಕಾರ್ಯಕ್ರಮಗಳಿಗೆ ಅವರು ಚಾಲನೆ ನೀಡಲಿದ್ದಾರೆ. 12 ಗಂಟೆಗೆ ಸುಳ್ಯ ನಿರೀಕ್ಷಣಾ ಮಂದಿರಕ್ಕೆ ಆಗಮಿಸಿ ವಿಶ್ರಾಂತಿ ಪಡೆದು 3.30ಕ್ಕೆ ಕಾಸರಗೋಡಿಗೆ ಹೊರಡುವರು ಎಂದು ಪ್ರಕಟಣೆ ತಿಳಿಸಿದೆ.