ನವ ದೆಹಲಿ: ಎಐಸಿಸಿಯ ನೂತನ ಅಧ್ಯಕ್ಷರಾಗಿ ಚುನಾಯಿತರಾದ ಮಲ್ಲಿಕಾರ್ಜುನ ಖರ್ಗೆ ಅ.26ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.ಕಾಂಗ್ರೆಸ್ನ ಹಿರಿಯ ನಾಯಕ
ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಖರ್ಗೆ 7897 ಮತ ಪಡೆದುಕೊಂಡರೆ, ಶಶಿ ತರೂರ್ 1072ಮತ ಪಡೆದುಕೊಂಡಿದ್ದರು. ಇದೀಗ ಮೊದಲ ಬಾರಿಗೆ ಗಾಂಧಿಯೇತರ ಕುಟುಂಬದ ಸದಸ್ಯರೊಬ್ಬರು ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸುತ್ತಿದ್ದಾರೆ.
ಅ.26ಕ್ಕೆ ಖರ್ಗೆ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧಿಕಾರ ಕೊನೆಗೊಳ್ಳಲಿದೆ. ಕಳೆದ 22 ವರ್ಷಗಳಿಂದ ಸತತವಾಗಿ ಸೋನಿಯಾ ಗಾಂಧಿ ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುತ್ತಿದ್ದರು.
.