ಸುಳ್ಯ:ಮುಂದಿನ ದಿನದಲ್ಲಿ ಸುಳ್ಯ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರು ಆಯ್ಕೆಯಾಗಬೇಕು ಎಂದು ಎಐಸಿಸಿ ವೀಕ್ಷಕರು ಹಾಗು ಕ್ಯಾಲಿಕಟ್ ಉತ್ತರ ಕ್ಷೇತ್ರದ ಶಾಸಕರಾದ ಜಯಂತ್ ಕೆ. ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಗೆ ಅಭಿಪ್ರಾಯ ಸಂಗ್ರಹಕ್ಕೆ ಸುಳ್ಯಕ್ಕೆ ಆಗಮಿಸಿದ ಅವರು ಸದರ್ನ್ ರೆಸಿಡೆನ್ಸಿಯಲ್ಲಿ ನಡೆದ
ಕಾರ್ಯಕರ್ತರ ಹಾಗು ಪ್ರಮುಖರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಸಿದ್ಧಾಂತದ ಆಧಾರದಲ್ಲಿ ಇರುವ ಪಕ್ಷ. ತತ್ಬ, ಸಿದ್ಧಾಂತದ ಆಧಾರದಲ್ಲಿ ಕಾರ್ಯನಿರ್ವಹಿಸುವ ಪಕ್ಷ ಕಾಂಗ್ರೆಸ್.ಈ ಬಾರಿ ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿಯೇ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದ ಅವರು ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕುರಿತು ವಿವರ ನೀಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಕೆ.ಹರೀಶ್ ಕುಮಾರ್, ಎಐಸಿಸಿ ವೀಕ್ಷಕರಾದ ಜಯಪ್ರಕಾಶ್ ಹೆಗ್ಡೆ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸುಳ್ಯ ಬ್ಲಾಕ್ ಉಸ್ತುವಾರಿ ನಝೀರ್ ಮಠ,ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸ್ವಾಗತಿಸಿದರು. ಬಳಿಕ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಂದವ ಅಭಿಪ್ರಾಯ ಸಂಗ್ರಹ ಮಾಡಲಾಯಿತು.











