ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆಗೆ ಸುಳ್ಯದಲ್ಲಿ ಅಭಿಪ್ರಾಯ ಸಂಗ್ರಹ ಆರಂಭಗೊಂಡಿದೆ. ಎಐಸಿಸಿ ನಿಯೋಜಿಸಿದ ವೀಕ್ಷಕರಾದ ಕ್ಯಾಲಿಕಟ್ ನಾರ್ತ್ ಕ್ಷೇತ್ರದ ಶಾಸಕ ಕೆ.ಜಯಂತ್ ಅವರ ನೇತೃತ್ವದ ತಂಡ ಆ.9ರಂದು ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯದ ಸದರ್ನ್ ರೆಸಿಡೆನ್ಸಿ ಸಭಾಂಗಣದಲ್ಲಿ
ಅಭಿಪ್ರಾಯ ಸಂಗ್ರಹ ಕಾರ್ಯ ನಡೆಯುತಿದೆ. ಸುಳ್ಯಕ್ಕೆ ಆಗಮಿಸಿದ ಎಐಸಿಸಿ ತಂಡವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಸಭೆಯ ಮೂಲಕ ನೂತನ ಜಿಲ್ಲಾಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಿದ್ದಾರೆ.
ಸುಳ್ಯ ಬ್ಲಾಕ್ ವ್ಯಾಪ್ತಿಯಲ್ಲಿ ಬ್ಲಾಕ್ ಪದಾಧಿಕಾರಿಗಳು, ಪಕ್ಷದಲ್ಲಿ ಸ್ಥಾನಮಾನ ಹೊಂದಿದವರು, ಎಲ್ಲಾ ಸರ್ಕಾರಿ ನಾಮನಿರ್ದೇಶಿತ ಅಧ್ಯಕ್ಷರು,ಸದಸ್ಯರು, ಮಾಜಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರು, ಹಾಗೂ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷರು,ಪಕ್ಷದ ಹಿರಿಯ ನಾಯಕರು ಹಾಗೂ ಬಿಎಲ್ಎ-2 ಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಲಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಕೆ.ಹರೀಶ್ ಕುಮಾರ್, ಜಯಪ್ರಕಾಶ್ ಹೆಗ್ಡೆ ಮತ್ತಿತರರು ಇದ್ದಾರೆ.











