ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಅ.17ರಂದು ನಡೆದಿರುವ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು ಖರ್ಗೆ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಶಶಿ ತರೂರ್ 1,072 ಮತಗಳನ್ನು ಪಡೆದಿದ್ದಾರೆ.416 ಮತಗಳನ್ನು ತಿರಸ್ಕರಿಸಲಾಗಿದೆ. 6,897 ಮತಗಳ ಅಂತರದಲ್ಲಿ ಖರ್ಗೆ ಗೆಲುವು ಸಾಧಿಸಿದರು. ಎರಡು ದಶಕಗಳ ಬಳಿಕ ಗಾಂಧಿಯೇತರ ನಾಯಕನಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಒಲಿದಿದೆ. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಈ ವರೆಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಆರು ಬಾರಿ ಚುನಾವಣೆ ನಡೆದಿದೆ.