ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದಾರೆ.
ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, ಬಳಿಕ ಘಟನಾ ಸ್ಥಳಕ್ಕೆ(ಮೇಘನಿನಗರ) ಕಾರಿನಲ್ಲಿ ತೆರಳಿ ಪರಿಶೀಲನೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರೊಂದಿಗೆ
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಇದ್ದರು. ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ, ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.
242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.
ದುರಂತದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ.