ಸುಳ್ಯ:10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವತಿಯಿಂದ ಏ.ಜೆ. ಸ್ಕಾಲರ್ಶಿಪ್ ಪರೀಕ್ಷೆ ಜ.4ರಂದು ನಡೆಯಿತು. 300ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತಲಾ
5ವಿದ್ಯಾರ್ಥಿಗಳಂತೆ ಒಟ್ಟು 10 ವಿದ್ಯಾರ್ಥಿಗಳಿಗೆ ಭೋದನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್, ಮೌರ್ಯ ಆರ್ ಕುರುಂಜಿ ಅವರು ಶುಭಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಹಾಗೂ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್, ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.ಪರೀಕ್ಷೆಯ ಫಲಿತಾಂಶವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.

ಕಳೆದ ಕೆಲವು ವರ್ಷಗಳಿಂದ ಸ್ಕಾಲರ್ಶಿಪ್ ಪರೀಕ್ಷೆ ನಡೆಸುವ ಮೂಲಕ ಹಲವಾರು ಮಂದಿ ವಿದ್ಯಾರ್ಥಿಗಳಿಗೆ ಲಕ್ಷಾಂತರ ರೂ.ಗಳ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಒಟ್ಟು 15 ಲಕ್ಷಕ್ಕೂ ಮೇಲ್ಪಟ್ಟ ಶುಲ್ಕ ವಿನಾಯಿತಿ ವಿದ್ಯಾರ್ಥಿಗಳಿಗೆ ದೊರೆಯಲಿದ್ದು ,ಪ್ರಥಮ ಬಂದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ 100% ರಿಯಾಯಿತಿ, ದ್ವಿತೀಯ 75% ರಿಯಾಯಿತಿ, ತೃತೀಯ 50% ರಿಯಾಯಿತಿ, ನಾಲ್ಕನೇ ಸ್ಥಾನ 25% , ಐದನೇ ಸ್ಥಾನ 15% ರಿಯಾಯಿತಿ ಇರುತ್ತದೆ. ಎಲ್ಲಾ ಶಾಲೆಯಲ್ಲಿ ಪ್ರಥಮ ಸ್ಥಾನಿಯಾದ ವಿದ್ಯಾರ್ಥಿಗೆ ಬೋಧನಾ ಶುಲ್ಕದಲ್ಲಿ ಸಂಪೂರ್ಣ ರಿಯಾಯಿತಿ ಇರುತ್ತದೆ. 620 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಸಂಪೂರ್ಣ ರಿಯಾಯಿತಿ ಇರುತ್ತದೆ. ಹಾಗೂ ಬಿಪಿಎಲ್ ಕಾರ್ಡ್ ಹೊಂದಿದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುತ್ತದೆ. ಶೇಕಡ 90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುತ್ತದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.












