.ಸುಳ್ಯ:10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪರೀಕ್ಷೆ ನಡೆಸಲಾಗುತ್ತದೆ. ಕಳೆದ ಕೆಲವು ವರ್ಷಗಳಿಂದ ಸ್ಕಾಲರ್ಶಿಪ್ ಪರೀಕ್ಷೆ ನಡೆಸುವ ಹಲವಾರು ಮಂದಿ ವಿದ್ಯಾರ್ಥಿಗಳಿಗೆ ಲಕ್ಷಾಂತರ ರೂ.ಗಳ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ. ಅತ್ಯಂತ ಜನಪ್ರಿಯವಾಗಿರುವ ಎ.ಜೆ.ಸ್ಕಾಲರ್ಶಿಪ್ ಪರೀಕ್ಷೆಯನ್ನು
ಪ್ರತಿ ವರ್ಷ ಸಾವಿರಾರು ಮಂದಿ ವಿದ್ಯಾರ್ಥಿಗಳು ಬರೆಯುವುದರ ಮೂಲಕ ತಮ್ಮ ಭವಿಷ್ಯದ ಅಧ್ಯಯನಕ್ಕೆ ಮುನ್ನುಡಿ ಬರೆದಿದ್ದಾರೆ. ಈ ಬಾರಿಯ ಸ್ಕಾಲರ್ಶಿಪ್ ಪರೀಕ್ಷೆ 2026 ಜನವರಿ 4 ರಂದು ನಡೆಯಲಿದೆ. ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಒಟ್ಟು 5 ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ. ಒಟ್ಟು 15 ಲಕ್ಷಕ್ಕೂ ಮೇಲ್ಪಟ್ಟ ಶುಲ್ಕ ವಿನಾಯಿತಿ ವಿದ್ಯಾರ್ಥಿಗಳಿಗೆ ದೊರೆಯಲಿದ್ದು ,ಪ್ರಥಮ ಬಂದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ 100% ರಿಯಾಯಿತಿ, ದ್ವಿತೀಯ 75% ರಿಯಾಯಿತಿ, ತೃತೀಯ 50% ರಿಯಾಯಿತಿ, ನಾಲ್ಕನೇ ಸ್ಥಾನ 25% , ಐದನೇ ಸ್ಥಾನ 15% ರಿಯಾಯಿತಿ ಇರುತ್ತದೆ. ಆಸಕ್ತ ವಿದ್ಯಾರ್ಥಿಗಳು ಲಿಂಕ್ ಸ್ಕ್ಯಾನ್ ಮಾಡಿ ಪ್ರವೇಶಾತಿ ಪಡೆಯಬಹುದು.
ಇದನ್ನು ಹೊರತುಪಡಿಸಿ ಎಲ್ಲಾ ಶಾಲೆಯಲ್ಲಿ ಪ್ರಥಮ ಸ್ಥಾನಿಯಾದ ವಿದ್ಯಾರ್ಥಿಗೆ ಬೋಧನಾ ಶುಲ್ಕದಲ್ಲಿ ಸಂಪೂರ್ಣ ರಿಯಾಯಿತಿ ಇರುತ್ತದೆ. 620 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಸಂಪೂರ್ಣ ರಿಯಾಯಿತಿ ಇರುತ್ತದೆ. ಹಾಗೂ ಬಿಪಿಎಲ್ ಕಾರ್ಡ್ ಹೊಂದಿದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುತ್ತದೆ. ಶೇಕಡ 90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುತ್ತದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.












