ಸುಳ್ಯ: ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಅಜ್ಜಾವರ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು. ಮುಖಂಡರು, ಕಾರ್ಯಕರ್ತರು ಮನೆ ಮನೆ ಭೇಟಿ ಮಾಡಿ ಪ್ರಚಾರ ಮಾಡಿ ಮತ
ಯಾಚನೆ ನಡೆಸಲಾಯಿತು. ಬಳಿಕ ಅಜ್ಜಾವರದಲ್ಲಿ ರೋಡ್ ಶೋ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು. ಸುಳ್ಯ ಮಂಡಲದ ಪ್ರಭಾರಿ ಹಾಗು ಬಿಜೆಪಿ ಕಣ್ಣೂರು ಜಿಲ್ಲಾ ಅಧ್ಯಕ್ಷ ಹರಿದಾಸ್ ಕಣ್ಣೂರು ಬಿಜೆಪಿ ಧ್ವಜ ನೀಡಿ ಪಕ್ಷಕ್ಕೆ ಸೇರ್ಪಡೆ ಮಾಡಿದರು. ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಮುಖಂಡರಾದ ನವೀನ್ ಕುಮಾರ್ ರೈ, ಮಹೇಶ್ ರೈ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.