ಸುಳ್ಯ:ಪ್ರತಾಪ ಯುವಕ ಮಂಡಲ ಅಜ್ಜಾವರ ಮತ್ತು ಚೈತ್ರ ಯುವತಿ ಮಂಡಲ ಅಜ್ಜಾವರ ಇದರ ವತಿಯಿಂದ 4ನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮ ಅಜ್ಜಾವರ ಕೊರಂಗುಬೈಲು ಗದ್ದೆಯಲ್ಲಿ ನಡೆಯಿತು. ಸುಳ್ಯದ ಎಒಎಲ್ಇಯ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪ್ರತಾಪ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ ಅಜ್ಜಾವರ ಅಧ್ಯಕ್ಷತೆ ವಹಿಸಿದ್ದರು. ವಿಶ್ವೇಶ್ವರ ತಾಂತ್ರಿಕ ವಿವಿಯ ಮಂಗಳೂರು ವಿಸ್ತರಣಾ ಕೇಂದ್ರದ
ವಿಶೇಷಾಧಿಕಾರಿ ಡಾ.ದಾಮೋದರ ನಾರಾಲು, ಸಿಎ ಬ್ಯಾಂಕ್ ಅಧ್ಯಕ್ಷ ವಿಕ್ರಮ್ ಎ.ವಿ, ದ.ಕ.ಜೇನು ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷ ಚಂದ್ ಕೋಲ್ಚಾರ್, ಸಂಧ್ಯಾರಶ್ಮಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಚೆನ್ನಕೇಶವ ಜಾಲ್ಸೂರು,ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ, ನಿವೃತ್ತ ಮುಖ್ಯೋಪಾಧ್ಯಾಯ ಪದ್ಮನಾಭ ಅತ್ಯಾಡಿ, ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಸಂಕೇಶ್ ಫೌಂಡೇಷನ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಸಂಕೇಶ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ನಾಯ್ಕ್, ಶಿಕ್ಷಕರಾದ ಗೋಪಿನಾಥ್ ಮೆತ್ತಡ್ಕ, ಸುದ್ದಿ ಸುಳ್ಯ ಹಬ್ಬ ಗ್ರಾಮ ಸಮಿತಿಯ ಅಧ್ಯಕ್ಷ ಕರುಣಾಕರ ಕೊಡೆಂಕಿರಿಪತ್ರಕರ್ತ ಹರೀಶ್ ಬಂಟ್ವಾಳ್, ಲೀಲಾವತಿ ಬಾಲಕೃಷ್ಣ ನಾಯ್ಕ್, ಭವ್ಯ ಭುವನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರತಾಪ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ ಅಜ್ಜಾವರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನವೀನ್ ವಂದಿಸಿದರು. ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.
ಸಂಧ್ಯಾರಶ್ಮಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ನಿರ್ದೇಶಕರಾದ
ಚೆನ್ನಕೇಶವ ಜಾಲ್ಸೂರು ತೆಂಗಿನ ಕಾಯಿ ಒಡೆಯುವ ಮೂಲಕ ಕೆಸರು ಗದ್ದೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಬಳಿಕ ಕೆಸರು ಗದ್ದೆಯಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು. ಮಕ್ಕಳಿಗೆ,ಮಹಿಳೆಯರಿಗೆ, ಪುರುಷರಿಗೆ ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.





