ಸುಳ್ಯ: ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ದರ್ಗಾ ಶರೀಫ್ ಮಖಾಂ ಉರೂಸ್ ಹಾಗೂ ಐದು ದಿನಗಳ ಧಾರ್ಮಿಕ ಪ್ರಭಾಷಣ ಫೆಬ್ರವರಿ 2 ರಿಂದ ಆರಂಭಗೊಂಡಿದ್ದು ಫೆ.6ರ ತನಕ ನಡೆಯಲಿದೆ
ಫೆ.2 ರಂದು ಶುಕ್ರವಾರ ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ಅಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು
ದಾರುಸ್ಸಲಾಂ ಬೆಳ್ತಂಗಡಿ ಅಧ್ಯಕ್ಷರಾದ ಸಯ್ಯಿದ್ ಝೈನುಲ್ ಅಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ ದುವಾಃ ನೇತೃತ್ವ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಜ್ಜಾವರ ಎಂಜೆಎಂ ಖತೀಬರಾದ ಅಬ್ದುಲ್ ಖಾದರ್ ಮುನವ್ವರಿ ಧಾರ್ಮಿಕ ಉಪನ್ಯಾಸ ನೀಡಿದರು. ಎಂಜೆಎಂ ಅಜ್ಜಾವರ-ಮೇನಾಲ ಇದರ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಎ ಅಧ್ಯಕ್ಷತೆ ವಹಿಸಿದ್ದರು.
ಫೆ.3ರಂದು ಶನಿವಾರ ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ಅಂಗಣದಲ್ಲಿ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಅಜ್ಜಾವರ ಮೇನಾಲ ಜಮಾ ಅತ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಎ, ಉಪಾಧ್ಯಕ್ಷರಾದ ಅಂದ ಹಾಜಿ ಪ್ರಗತಿ, ಕಾರ್ಯದರ್ಶಿ ಶಾಫಿ ಮುಕ್ರಿ, ಕೋಶಾಧಿಕಾರಿ ಶರೀಫ್ ರಿಲಾಕ್ಸ್ ಮತ್ತಿತರರು ಉಪಸ್ಥಿತರಿದ್ದರು.









