ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ (ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ)ಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷರಾಗಿರುವ ಸಮಿತಿಯಲ್ಲಿಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಅರಂತೋಡಿನ ಭಾರತಿ ಪುರುಷೋತ್ತಮ ಉಳುವಾರು, ವಕೀಲ ಜಗದೀಶ್ ಡಿ.ಪಿ.ಅವವರನ್ನು ನೇಮಿಸಲಾಗಿತ್ತು. ಅಕ್ರಮ ಸಕ್ರಮ ಸಮಿತಿಗೆ
ಬಿಜೆಪಿ ಮುಖಂಡರು ನೇಮಕಗೊಂಡ
ಈ ಆದೇಶ ಪ್ರತಿ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದಂತೆ ಎಚ್ಚತ್ತ ಇಲ್ಲಿನ ಕಾಂಗ್ರೆಸ್ ಮುಖಂಡರು ಸಚಿವರುಗಳನ್ನು ಸಂಪರ್ಕಿಸಿ ಆದೇಶವನ್ನು ತಡೆ ಹಿಡಿದಿದೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವಾಗ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯರು ನೇಮಕ ಆಗಿರುವುದು ಸಂಚಲನ ಮೂಡಿಸಿದೆ.
ಅಕ್ರಮ ಸಕ್ರಮ ಸಮಿತಿಗೆ ಸದಸ್ಯರ ಹೆಸರುಗಳನ್ನು ಸೂಚಿಸುವಂತೆ ಶಾಸಕರ ಕಚೇರಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯರ ಅವರ ಕಚೇರಿ ನೀಡಿದ ಹೆಸರುಗಳನ್ನು ರಾಜ್ಯ ಸರಕಾರಕ್ಕೆ ಕಳುಹಿಸಿದ್ದರೆಂದೂ, ಅದು ಈಗ ಆದೇಶವಾಯಿತೆಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಟ್ಟಿ ಕಳುಹಿಸಲಾಗಿದ್ದು ಹೊಸ ಸಮಿತಿ ಸದಸ್ಯರ ನೇಮಕ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತಿದೆ.