ಸುಳ್ಯ: ಕನಿಷ್ಠ ವೇತನವನ್ನು ಘೋಷಿಸುವಂತೆ ಒತ್ತಾಯಿಸಿ
ಸುಳ್ಯ ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ಸುಳ್ಯ ತಾಲೂಕು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಸುಳ್ಯ ತಾಲೂಕು ಅಕ್ಷರ ದಾಸೊಹ ನೌಕರ ಸಂಘದ ಗೌರವಾಧ್ಯಕ್ಷ ಕೆ.ಪಿ ರಾಬರ್ಟ್ ಡಿಸೋಜ ಮಾತನಾಡಿ
ನೌಕರರಿಗೆ
ಕನಿಷ್ಠ ವೇತನ ನೀಡಬೇಕು ಎಂದು ಒತ್ತಾಯಿಸಿದರು. ಬಿಸಿಯೂಟ ನೌಕರರನ್ನು 600ರೂ, ಆಶಾ ಕಾರ್ಯಕರ್ತೆರಿಗೆ 2000ರೂ, ಅಂಗನವಾಡಿ ನೌಕರರಿಗೆ 4500 ರೂ ಕೊಟ್ಟು ದುಡಿಸುವುದು ಸಾಮಾಜಿಕ ನ್ಯಾಯ ಸಮ್ಮತವಲ್ಲ. “ಗೌರವಧನ” ಎಂಬ ಪಟ್ಟಕಟ್ಟಿ ಎಲ್ಲ ಸವಲತ್ತುಗಳಿಂದ ವಂಚನೆ ಮಾಡುವುದು ಸರಿಯಲ್ಲ. ಕನಿಷ್ಠ ವೇತನ ಒದಗಿಸಬೇಕು ಎಂದು ಹೇಳಿದರು.
ತಾಲೂಕು ಸಂಘದ ಅಧ್ಯಕ್ಷೆ ಲೀಲಾವತಿ ಕೆ.ಅಲೆಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು.ಪ್ರಧಾನ ಕಾರ್ಯದರ್ಶಿ ಲೀಲಾವತಿ ಸ್ವಾಗತಿಸಿದರು.ಕೋಶಾಧಿಕಾರಿ ಪುಷ್ಪಾ ಬಿ.ಕೆ ವಂದಿಸಿದರು.











