ಸುಳ್ಯ: ಇಂದು ನಾಡಿನೆಲ್ಲಡೆ ವಿಜಯದಶಮಿ ಸಂಭ್ರಮ ಈ ಪ್ರಯುಕ್ತ ವಿವಿಧ ದೇವಸ್ಥಾನ ಹಾಗೂ ಮತ್ತಿತರ ಕಡೆಗಳಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಹಾಗೂ ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ನಡೆಯುತ್ತಿರುವ 52ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ಸುಳ್ಯ ದಸರಾ ಅಂಗವಾಗಿ
ಶಾರದಾಂಬಾ ಕಲಾವೇದಿಕೆಯಲ್ಲಿ ಅಕ್ಷರಾಭ್ಯಾಸ ನಡೆಸಲಾಯಿತು. ಬೆಳಿಗ್ಗೆ 6.49ರಿಂದ ಅಕ್ಷರಾಭ್ಯಾಸ ಆರಂಭಗೊಂಡಿತು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಪುಟಾಣಿಗಳು ಜ್ಞಾನದ ಮೊದಲ ಅಕ್ಷರ ಬರೆದರು.
ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.
ಸುದರ್ಶನ ಭಟ್ ಉಜಿರೆ ಉಪಸ್ಥಿತರಿದ್ದರು.
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ಚಿದಾನಂದ ವಿದ್ಯಾನಗರ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ದಸರಾ ಸೇವಾ ಟ್ರಸ್ಟ್ನ ಉಪಾಧ್ಯಕ್ಷರಾದ ನಾರಾಯಣ ಕೇಕಡ್ಕ, ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಕೋಶಾಧಿಕಾರಿ ಪುರುಷೋತ್ತಮ ಕೆ, ಶಾರದಾಂಬಾ ಸೇವಾ ದಸರಾ ಸೇವಾ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸತೀಶ್ ಎಂ.ಕೆ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ನಿರ್ದೇಶಕರಾದ ರಾಜು ಪಂಡಿತ್, ಚಂದ್ರಶೇಖರ ಪಂಡಿತ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.