ಗೂನಡ್ಕ: ಗೂನಡ್ಕದ ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಪುತ್ತೂರು ಕಮ್ಯೂನಿಟಿ ಸೆಂಟರ್ ಸಹಯೋಗದೊಂದಿಗೆ ದೇವರಕೊಲ್ಲಿ, ಕೊಯನಾಡು, ಸಂಪಾಜೆ, ಕಲ್ಲುಗುಂಡಿ, ಗೂನಡ್ಕ, ಪೇರಡ್ಕ, ಅರಂತೋಡು ಹಾಗೂ ಪೆರಾಜೆ ಜಮಾಅತಿಗೆ ಒಳಪಟ್ಟ ಅಲ್ಪಸಂಖ್ಯಾತ ಮುಸ್ಲಿಂ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ “ಒಂದೇ ಗುರಿ ಒಂದೇ ಭವಿಷ್ಯ” ಎಂಬ ಶೀರ್ಷಿಕೆಯಡಿಯಲ್ಲಿ ಶೈಕ್ಷಣಿಕ ತರಬೇತಿ
ಕಾರ್ಯಾಗಾರವು ಗೂನಡ್ಕದ ಬದ್ರಿಯಾ ಜುಮಾ ಮಸೀದಿಯ ವಠಾರದಲ್ಲಿ ಜರುಗಿತು. ಗೂನಡ್ಕದ ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಮಹಮ್ಮದ್ ಅಲೀ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಜಾಫರ್ ಸಾದಿಕ್ ಗೂನಡ್ಕಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ ಅಮೀನ್ ಸಂಸ್ಥೆಯ ಗೌರವಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಪಿ.ಕೆ.ಅಬೂಸಾಲಿ ಹಾಗೂ ಶೌವಾದ್ ಗೂನಡ್ಕರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೂನಡ್ಕದ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷರಾದ ಡಿ.ಆರ್.ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿ ಉಮ್ಮರ್ ದರ್ಖಾಸ್ ಅವರು ಈ ಸಂದರ್ಭ ಉಪಸ್ಥಿತರಿದ್ದರು.ತರಬೇತುದಾರರಾದ ರಫೀಕ್ ಮಾಸ್ತರ್, ಡಾ.ವಾಜಿದಾ ಪುತ್ತೂರು ಅವರು ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ತರಬೇತಿ ನೀಡಿದರು. ಪುತ್ತೂರು ಕಮ್ಯೂನಿಟಿ ಸೆಂಟರ್ನ ಹನೀಫ್ ಪುತ್ತೂರು ಅವರು ತಮ್ಮ ಸಂಸ್ಥೆಯಿಂದ ವತಿಯಿಂದ ಕೌನ್ಸಿಲಿಂಗ್ ಮತ್ತು ವಿದ್ಯಾರ್ಥಿಗಳಿಗಿರುವ ಶೈಕ್ಷಣಿಕ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಪ್ರೌಢಶಾಲೆಯ 117 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಾಗಾರದಲ್ಲಿ ಭಾಗಿಯಾಗಿ ಸದುಪಯೋಗವನ್ನು ಪಡೆದುಕೊಂಡರು. ಇಜಾಸ್ ಗೂನಡ್ಕ, ಅಝೀಝ್ ಕಾರ್ಯಕ್ರಮ ನಿರೂಪಿಸಿದರು.