ಸುಳ್ಯ:ಸುಳ್ಯ ತಾಲೂಕಿನ ನಾರ್ಕೋಡು – ಆಲೆಟ್ಟಿ – ಬಡ್ಡಡ್ಕ ಲೋಕೋಪಯೋಗಿ ರಸ್ತೆಯ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ಕೇರಳ ಅಂತರಾಜ್ಯ ಸಂಪರ್ಕ
ರಸ್ತೆಯಾಗಿದ್ದು, ಅಗಲ ಕಿರಿದಾಗಿ, ಹೊಂಡ ಗುಂಡಿಗಳಿಂದ ಜನ ಸಂಚಾರಕ್ಕೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ಸಂಪೂರ್ಣ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದ್ದಾರೆ.ಆಲೆಟ್ಟಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸತ್ಯಕುಮಾರ್ ಆಡಿಂಜಾ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ನಿಯೋಗ ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ನಿಯೋಗದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕಾಂಗ್ರೆಸ್ ಮುಖಂಡರಾದ ದೇವಪ್ಪ ನಾಯ್ಕ ಹೊನ್ನೆಡಿ, ಎಸ್ ಸಂಶುದ್ದಿನ್, ಶಿವಕುಮಾರ್ ಕಂಡಡ್ಕ, ರಕ್ಷಿತ್ ದೊಡ್ಡಡ್ಕ, ಕೇಶವ ಮೊರಂಗಲ್ಲು ಇದ್ದರು.












