ಸುಳ್ಯ: ಅಂತಾರಾಜ್ಯ ಸಂಪರ್ಕಿಸುವ ಅಲೆಟ್ಟಿ – ಬಡ್ಡಡ್ಕ – ಕೂರ್ನಡ್ಕ ರಸ್ತೆ ಅಭಿವೃದ್ಧಿಗೆ ಮಂಜೂರುಗೊಂಡ ರೂ 7 ಕೋಟಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೆ ಟೆಂಡರ್ ಪ್ರಕ್ರಿಯೆ ಕೂಡಲೇ ಪೂರ್ತಿ ಮಾಡಬೇಕು ಎಂದು
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ರಸ್ತೆ ಅಭಿವೃದ್ಧಿಗೆ

ಟೆಂಡರ್ ಪ್ರಕ್ರಿಯೆ ಪೂರ್ತಿ ಮಾಡಬೇಕು ಎಂದು ಸುಳ್ಯದ ಪ್ರಮುಖರು ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರು.ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ, ಕಾಂಗ್ರೆಸ್ ಗ್ರಾಮ ಸಮಿತಿ ಮಾಜಿ ಅಧ್ಯಕ್ಷ ಸತ್ಯಕುಮಾರ್ ಆಡಿಂಜ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಸಚಿವರನ್ನು ಸನ್ಮಾನಿಸಿದರು.ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೊಲ್ಚಾರ್, ಸಾಮಾಜಿಕ ಕಾರ್ಯಕರ್ತೆ ಸಂಧ್ಯಾ ಮಂಡೆಕೋಲು ಉಪಸ್ಥಿತರಿದ್ದರು.



























