ಸುಳ್ಯ:ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜೂನ್ 7 ಮತ್ತು 8ರಂದು ಆಳ್ವಾಸ್ ಪ್ರಗತಿ-2024 'ಬೃಹತ್ ಉದ್ಯೋಗ ಮೇಳ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಳ್ವಾಸ್ ಪ್ರತಿಷ್ಠಾನವು ಶೈಕ್ಷಣಿಕ ಕ್ಷೇತ್ರದ ಉತ್ಕೃಷ್ಟ ಉದಾಹರಣೆಯಾಗಿ, ಇಡೀ ದೇಶದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಸಾಧನೆಗಳಿಂದ
ಹೆಗ್ಗುರುತಾಗಿ ಬೆಳೆಯುತ್ತಿದೆ
.
ಆಳ್ವಾಸ್ ಪ್ರಗತಿ’ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 2007 ರಿಂದ ನಡೆಸಿಕೊಂಡು ಬರುತ್ತಿರುವ ಬೃಹತ್ ಉದ್ಯೋಗ ಮೇಳವಾಗಿದ್ದು, ಸಂಸ್ಥೆಯ ಸಿಎಸ್ಆರ್ ಚಟುವಟಿಕೆಯ ಭಾಗವಾಗಿ ಗ್ರಾಮೀಣ ಭಾಗದ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳಿಗೆ ಉಚಿತವಾಗಿ ವಿಶೇಷ ಔದ್ಯೋಗಿಕ ನೆರವು ನೀಡುವ ಉದ್ದೇಶವನ್ನು ವ್ಯವಸ್ಥಿತವಾಗಿ ಪೂರೈಸುತ್ತಾ ಬಂದಿದೆ.
ಸಂಸ್ಥೆಯು ಈವರೆಗೆ 20 ಬೃಹತ್ ಉದ್ಯೋಗ ಮೇಳಗಳನ್ನು ನಡೆಸಿಕೊಂಡು ಬಂದಿದೆ. ಒಟ್ಟು 1.60 ಲಕ್ಷ ಆಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರೆ 55,564 ಅಭ್ಯರ್ಥಿಗಳು ವಿವಿಧ ಕಂಪೆನಿಗಳಿಗೆ ಶಾರ್ಟ್ ಲೀಸ್ಟ್ ಗೊಂಡಿದ್ದಾರೆ. ಪ್ರತೀ ಉದ್ಯೋಗ ಮೇಳದಲ್ಲಿ ಸುಮಾರು 200 ರಷ್ಟು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಂಡು, ಇಲ್ಲಿವರೆಗೆ ಒಟ್ಟು 31,896 ಉದ್ಯೋಗಗಳನ್ನು ನೀಡಿವೆ.
14ನೇ ಆವೃತ್ತಿಯ ಉದ್ಯೋಗ ಮೇಳ:
ಆಳ್ವಾಸ್ ಪ್ರಗತಿ ಉತ್ಪಾದನ ವಲಯ ಮುಖ್ಯಸ್ಥರಾದ ಶ್ರೀನಿವಾಸ್ ಮಾತನಾಡಿ ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಈ ಬಾರಿ 14 ನೇ ಆವೃತ್ತಿಯದ್ದಾಗಿದ್ದು, ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್ಎಸ್ಎಲ್ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ.
200 ಕ್ಕೂ ಕಂಪೆನಿಗಳು ಭಾಗವಹಿಸಲಿದೆ. 14 ಉದ್ಯೋಗದಾತ ವಲಯಗಳಿಂದ
ಉದ್ಯೋಗ ಅವಕಾಶ ದೊರೆಯಲಿದೆ.
ಫ್ಯಾಕ್ಸೆಟ್ ಸಂಸ್ಥೆ, ಇಎಕ್ಸ್ಎಲ್ ಸರ್ವೀಸ್, ಮಹೀಂದ್ರಾ ಫಿನಾನ್ಸ್, ಪ್ರತಿಷ್ಠಿತ ಬ್ಯಾಂಕ್ಗಳಾದ ಎಚ್ಡಿಎಫ್ಸಿ, ಆ್ಯಕ್ಸಿಸ್, ಐಡಿಎಫ್ಸಿ ಫಸ್ಟ್ ಬ್ಯಾಂಕ್, ಬಂಧನ್ ಬ್ಯಾಂಕ್,ಲಾಜಿಸ್ಟಿಕ್ ಸಪ್ಲೈ ಚೈನ್ ಕಂಪೆನಿ ಫ್ಲಿಪ್ಕಾರ್ಟ್, ಇವೈ ಕಂಪೆನಿ,ಮ್ಯಾಕ್ಸ್ ಹೈಪರ್ ಮಾರ್ಕೆಟ್, ಜಾಯ್ ಅಲುಕ್ಕಾಸ್,
ಅಮೆಜಾನ್ ಕಂಪೆನಿ,ಟೆಕ್ ಮಹೇಂದ್ರ, ಎರ್ಕ್ಸ್ರ್ಪಟೈಸ್,
ಉತ್ಪಾದನಾ ವಲಯದಲ್ಲಿ ಕಿರ್ಲೋಸ್ಕರ್, ಟೊಯೋಟಾ ಟೆಕ್ಸಟೈಲ್ ಮೆಷಿನರಿ, ಉಷಾ ಆರ್ಮರ್ ಮುಂತಾದ ಕಂಪೆನಿಗಳು ಭಾಗವಹಿಸಲಿವೆ.
ಐಟಿ ವಲಯದಲ್ಲಿ ಇನ್ಫೋಮೆಟಿಕಾ, ಇಜಿಡಿಕೆ ಪ್ರೈ.ಲಿ, ವೆಲಂಕಣಿ ಸಾಫ್ಟವೇರ್ ಪ್ರೈಲಿ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ದಿಯಾ ಸಿಸ್ಟಮ್ಸ್, ಕಾನ್ಸೆಂಟ್ರಿಕ್ಸ್, ವಿನ್ಮ್ಯಾನ್ ಸಾಫ್ಟ್ವೇರ್ ಕಂಪೆನಿಗಳು, ಕಲ್ಟ್ಫಿಟ್, ಐಟಿಸಿ ಲಿಮಿಟೆಡ್, ಬ್ಲೂಸ್ಟೋನ್ ಜ್ಯುವೆಲ್ಲರಿಗಳು,
ಅಜಾಕ್ಸ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಬುಹ್ಲರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ನೆಕ್ಸ್ಟೀರ್, ಆಟೋಮೋಟಿವ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ವಂಡರ್ಲಾ ಹಾಲಿಡೇಸ್ನಂತಹ ಕಂಪೆನಿಗಳು ಮೆಕ್ಯಾನಿಕಲ್ ಇಂಜಿನಿಯರ್ಗಳಿಗೆ ೫೦ಕ್ಕೂ ಹೆಚ್ಚಿನ ಉದ್ಯೋಗಾವಕಾಶ ನೀಡಲಿವೆ. ವೋಲ್ವೋಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್,
ಆ್ಯಂಥಮ್ ಬಯೋ, ರೆಸಿ ಫಾರ್ಮಾ, ಹೈದರಾಬಾದ್ನ ಎಂಎಸ್ಎನ್ ಲ್ಯಾಬೋರೇಟರೀಸ್ ಹಾಗೂ ಹಿಟಿರೋ ಲ್ಯಾಬ್ಸ್,
ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್., ಏರೋಸ್ಪೇಸ್ ಡಿವಿಶನ್, ಸೆರಾಟಿಜಿಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮೆಷಿನರಿ ಪ್ರೈ ಲಿಮಿಟೆಡ್, ವೋಲ್ವೋ ಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪೆನಿಗಳು,
ನರ್ಸಿಂಗ್ ಪದವೀಧರ ಅಭ್ಯರ್ಥಿಗಳಿಗೆ ಪ್ರಮುಖ ಆಸ್ಪತ್ರೆಗಳಾದ ಹಿರಾನಂದನಿ ಆಸ್ಪತ್ರೆ, ಮುಂಬೈಯ ಅಪೊಲೊ ಆಸ್ಪತ್ರೆ, ಕೆಎಂಸಿ ಆಸ್ಪತ್ರೆ ಹಾಗೂ ಇನ್ನಿತರ ವೈದ್ಯಕೀಯ ಸಂಸ್ಥೆಗಳು ಉದ್ಯೋಗ ನೀಡಲಿವೆ.
ಎಂದು ವಿವರಿಸಿದರು.
ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಜೂನ್ 6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.ಐಟಿಐ, ಡಿಪ್ಲೋಮಾ ಹಿನ್ನಲೆಯವರಿಗೆ ಆಳ್ವಾಸ್ನಿಂದ ಬಸ್ಸಿನ ವ್ಯವಸ್ಥೆ ಒದಗಿಸಲಾಗುವುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
೯೦೦೮೯೦೭೭೧೬, ೯೬೬೩೧೯೦೫೯೦, ೭೯೭೫೨೨೩೮೬೫, ೯೭೪೧೪೪೦೪೯೦ ಅಭ್ಯರ್ಥಿಗಳ ನೊಂದಾವಣೆ ಹಾಗೂ ಉದ್ಯೋಗ ನೀಡಲಿರುವ ಕಂಪೆನಿಗಳ ಮಾಹಿತಿಗೆ:www.alvaspragathi.com
ಕಂಪೆನಿಗಳ ನೊಂದಾವಣೆ ಹಾಗೂ ಇತರ ಮಾಹಿತಿಗೆ: ೮೯೭೧೨೫೦೪೧೪
ಅಭ್ಯರ್ಥಿಗಳು ಲಗತ್ತಿಸಬೇಕಾದ ಅಗತ್ಯ ದಾಖಲಾತಿಗಳು: ೫-೧೦ ಪಾಸ್ಪೋರ್ಟ್ ಭಾವಚಿತ್ರಗಳು.ಸಂಪೂರ್ಣ ಶೈಕ್ಷಣಿಕ ಮಾಹಿತಿಗಳನ್ನೊಳಗೊಂಡ ರೆಸ್ಯೂಮ್ಅಂಕ ಪಟ್ಟಿಗಳು (ನೆರಳಚ್ಚು ಪ್ರತಿಗಳು) ಆನ್ಲೈನ್ ರಿಜಿಸ್ಟ್ರೇಶನ್ ನಂಬರ್/ಐಡಿ.
ಅಭ್ಯರ್ಥಿಗಳು ಉದ್ಯೋಗ ಮೇಳದಂದು ಬೆಳಿಗ್ಗೆ ೮ ಗಂಟೆಗೆ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ಹಾಜರಿರಬೇಕು ಎಂದು ಪ್ರಸಾದ್ ಶೆಟ್ಟಿ ಹಾಗೂ ಶ್ರೀನಿವಾಸ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕರಾದ ರವಿ ಶೆಣೈ ಉಪಸ್ಥಿತರಿದ್ದರು.