ಮೂಡುಬಿದಿರೆ:ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಣ್ಣಿಸಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ‘ಅಳ್ವಾಸ್ ವಿರಾಸತ್” ಉದ್ಘಾಟಿಸಿ ಅವರು ಮಾತನಾಡಿದರು. ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕಾರ್ಯಕ್ರಮ. ಸಾಹಿತ್ಯ ಮತ್ತು ಸಂಸ್ಕೃತಿ ಜೊತೆಯಾಗಿ ಮೇಳೈಸಿದ ಕಾರ್ಯಕ್ರಮ. ನಮ್ಮ
ಸಾಂಸ್ಕೃತಿಕ ಸಂಪತ್ತು ಹೆಚ್ಚಾದಾಗ ಮನಸ್ಸು ಅರಳುತ್ತದೆ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಅಂದು ಊರಿಗೆ ಸೀಮಿತವಾಗಿದ್ದ ವಿರಾಸತ್ ಇಂದು ರಾಷ್ಟ್ರೀಯ ಹಬ್ಬವಾಗಿದೆ.
ವಿರಾಸತ್ ಅನ್ನು ಸಮಗ್ರವಾಗಿ ರೂಪಿಸಲಾಗಿದ್ದು, ಪಂಚೇಂದ್ರಿಯಗಳಿಗೆ ಜ್ಞಾನ ನೀಡುವ ಕಾರ್ಯಕ್ರಮವಾಗಿದೆ. ಯುವಕರು, ಹಿರಿಯರು, ವೃದ್ಧರೆಲ್ಲರಿಗೂ ವಿರಾಸತ್ ಮುದ ನೀಡಲಿದೆ ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಎಂ.ಜಿ.ಆರ್. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ವಹಿಸಿದ್ದರು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಕಟೀಲು ದುರ್ಗಾಪರಮೇಶ್ವರಿ ದೇವಾಲಯದ ಆನುವಂಶಿಕ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ, ಶಾರದಾ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಎಂ.ಬಿ.ಪುರಾಣಿಕ, ಬರೋಡ ಶಶಿ ಕೇಟರಿಂಗ್ ಸರ್ವೀಸಸ್ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ, ಬೆಂಗಳೂರು ಕೆ.ಎಲ್.ಎನ್. ಎಂಜಿನಿಯರಿಂಗ್ ಆಡಳಿತ ನಿರ್ದೇಶಕ ಪ್ರಸನ್ನ ಕುಮಾರ್ ಶೆಟ್ಟಿ,ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್ ಪೋರ್ಟ್ ನ ಎಂ.ರವೀಂದ್ರನಾಥ ಆಳ್ವ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕಲ್ಕೂರ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, , ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ, ಮೂಡುಬಿದಿರೆ ಧನಲಕ್ಷ್ಮೀ ಕ್ಯಾಶ್ಯೂಸ್ ಆಡಳಿತ ನಿರ್ದೇಶಕ ಕೆ. ಶ್ರೀಪತಿ ಭಟ್, ಕೆನರಾ ಬ್ಯಾಂಕಿನ ಸುಧಾಕರ್ ಕೊಠಾರಿ, ಪ್ರಮುಖವಾದ ಜಯಶ್ರೀ ಅಮರನಾಥ ಶೆಟ್ಟಿ, ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ತಿಮ್ಮಯ್ಯ ಶೆಟ್ಟಿ, ರಾಮಯ್ಯ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ., ಮಂಗಳೂರು ಭಾರತ್ ಇನ್ಫ್ರಾಟೆಕ್ನ ಮುಸ್ತಾಫ ಎಸ್.ಎಂ, ಮೂಡುಬಿದಿರೆ ಬಿಮಲ್ ಕನ್ಸ್ಟ್ರಕ್ಷನ್ ನಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಮೇಳಗಳು:
ಅನ್ವೇಷಣಾತ್ಮಕ ಶತಾಯುಷಿ ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳಗಳೂ ಮಂಗಳವಾರ ಬೆಳಿಗ್ಗೆ ಉದ್ಘಾಟನೆಗೊಂಡಿದ್ದು, ಡಿ.15ರ ವರೆಗೆ ನಡೆಯಲಿವೆ.