ಸುಳ್ಯ: ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಶುಪಾಲರಾದ ಡಾ. ಯಶೋದಾ ರಾಮಚಂದ್ರ ಕಾರ್ಯಕ್ರಮದ
ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿ ಇ ಒ ಡಾ. ಉಜ್ವಲ್ ಯು ಜೆ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಿಂದಾಗುವ ಉಪಯೋಗ ಹಾಗೂ ಮಾನಸಿಕ ಒತ್ತಡ ನಿಯಂತ್ರಣ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್, ಮೌರ್ಯ ಆರ್ ಕುರುಂಜಿ ಅವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳಾದ ಮಾಧವ ಬಿ ಟಿ,ಪ್ರಸನ್ನ ಕಲ್ಲಾಜೆ,ದೈಹಿಕ ಶಿಕ್ಷಕರಾದ ಡಾ. ರಾಜೇಶ್ ಕುಮಾರ್ , ಪ್ರಶಾಂತ್ ಕೆ,ಆಶಾಲತ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್, ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಪ್ರತಿಜ್ಞಾ ಸ್ವಾಗತಿಸಿ ಖಲಿದಾ ನ್ಯೂಹ ಕಾರ್ಯಕ್ರಮ ವಂದಿಸಿದರು.