ಸುಳ್ಯ:ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ನಡೆಯುತು. ಜವಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಬೆಳಗಿನ ಅಸೆಂಬ್ಲಿಯನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗಾಗಿ
ಶಿಕ್ಷಕರೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದು, ವಿದ್ಯಾರ್ಥಿಗಳಿಗೆ ಮನೋರಂಜನೆಯ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಿ ಸಂಭ್ರಮಿಸಿದರು.ಆಂಗ್ಲ ಭಾಷಾ ಉಪನ್ಯಾಸಕಿ ಮಲ್ಲಿಕಾ ಎಂ ಎಲ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಟ್ರಸ್ಟಿ ಶ್ರೀ ಮೌರ್ಯ ಆರ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.





