ಸುಳ್ಯ:ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ಕಾರ್ಯಕ್ರಮ. ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ “Wisdom bite on inspiration” ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು ಜೆ ಅವರು ಸುಮಾರು 35ಕ್ಕೂ ಹೆಚ್ಚಿನ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳ ಕುರಿತು ಸವಿವರವಾದ ಮಾಹಿತಿ ನೀಡಿಸರು ಪೋಷಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸಬೇಕು ಹಾಗೂ ಮಕ್ಕಳನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.ಇನ್ನೊರ್ವ ಸಂಪನ್ಮೂಲ ವ್ಯಕ್ತಿ ಡಾ. ನಾರಾಯಣ ಶೇಡಿಕಜೆ ಇವರು ವಿದ್ಯಾರ್ಥಿಗಳು ಹೇಗೆ ಪರೀಕ್ಷೆಗಳನ್ನು ಎದುರಿಸಬೇಕು, ಪೂರ್ವಭಾವಿ ತಯಾರಿಗಳನ್ನು ಹೇಗೆ ಮಾಡಬೇಕು ಮತ್ತು ಹೆತ್ತವರು ಈ ನಿಟ್ಟಿನಲ್ಲಿ ನಿರ್ವಹಿಸಬಹುದಾದ ಜವಾಬ್ದಾರಿಗಳನ್ನು ಮನದಟ್ಟು ಮಾಡಿದರು. ಉಪನ್ಯಾಸಕರಾದ ಭವ್ಯ ಸಿ ಟಿ ವಂದಿಸಿದರು,
ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮಕ್ಕೆ
ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.