ಸುಳ್ಯ:ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಜಿನಿಯರಿಂಗ್ ದಿನಾಚರಣೆ ಆಚರಿಸಲಾಯಿತು. ಉಪನ್ಯಾಸಕಿ ರತ್ನಾವತಿ ಬಿ ಅವರು ವಿಶ್ವೇಶ್ವರಯ್ಯ ಅವರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ
ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ಮಾತನಾಡಿ ರಾಷ್ಟ್ರಕಟ್ಟುವ ಕಾರ್ಯದಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ವಿಶ್ವೇಶ್ವರಯ್ಯ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಬೇಕೆಂದು ಹೇಳಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಸಿಬ್ಬಂದಿಗಳು ಉಪಸ್ಥಿತರಿದ್ದರು.