ಸುಳ್ಯ:ಸತತ ಶೇ.100 ಫಲಿತಾಂಶ ದಾಖಲಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಪದವಿ ಪೂರ್ವ ಕಾಲೇಜು ಸುಳ್ಯ ಕುರುಂಜಿಭಾಗ್ನ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನಲ್ಲಿ ಪ್ರವೇಶಾತಿ ಆರಂಭಗೊಂಡಿದೆ.ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷ ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರ ಆಡಳಿತಕ್ಕೆ ಒಳಪಟ್ಟ
ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ
ಪಡೆಯುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ಕಾಲೇಜಿನ ಆಡಳಿತ ಘೋಷಿಸಿದೆ. ಅಂದರೆ ಎಸ್ಎಸ್ಎಲ್ಸಿಯಲ್ಲಿ ಅತ್ಯುತ್ತಮ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಟ್ಯೂಷನ್ ಫೀಸ್ ಸಂಪೂರ್ಣ ರಿಯಾಯಿತಿ ನೀಡಲಾಗುವುದು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ (ರಾಜ್ಯ ಬೋರ್ಡ್) 625 ರಲ್ಲಿ 620 ಪಡೆಯುವ ವಿದ್ಯಾರ್ಥಿಗಳಿಗೆ ಟ್ಯೂಷನ್ ಫೀಸ್ ಉಚಿತವಾಗಿರುತ್ತದೆ. ಅದರಂತೆ 10ನೇ ತರಗತಿ (ಸಿಬಿಎಸ್ಇ)ಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಟ್ಯೂಷನ್ ಫೀಸ್ ಸಂಪೂರ್ಣ ಉಚಿತವಾಗಿರುತ್ತದೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ದೂರವಾಣಿ ಸಂಖ್ಯೆಯನ್ನು
8904985254
9880014218
7259921480
ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
