ಸುಳ್ಯ:ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ವಾರ್ಷಿಕೋತ್ಸವ ‘ಎಜೆ ಫಿಯೆಸ್ಟಾ’ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವದಲ್ಲಿ ನಡೆಯಿತು.ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮಕ್ಕಳಿಗೆ ಸುಜ್ಞಾನವನ್ನು ತುಂಬಿ ಉತ್ತಮ ಪ್ರಜೆಗಳಾಗಿ ಬೆಳೆಸಬೇಕು, ಆ ಕೆಲಸ ಪೋಷಕರಿಂದ, ಶಿಕ್ಷಕರಿಂದ ಆಗಬೇಕು. ಅಮರಜ್ಯೋತಿ ಪಿ.ಯು ಕಾಲೇಜು ಈ ನಿಟ್ಟಿನಲ್ಲಿ
ಮಾದರಿಯಾಗಿದೆ ಎಂದು ಹೇಳಿದರು. ಕೆವಿಜಿ ಚಾರಿಟಬಲ್ ಟ್ರಸ್ಟ್ ನ ಟ್ರಸ್ಟಿ ಹಾಗೂ ಎಒಎಲ್ಇ ಕಮಿಟಿ ಬಿ ಕಾರ್ಯದರ್ಶಿ ಡಾ. ಜ್ಯೋತಿ ಆರ್ ಪ್ರಸಾದ್ ಸಮಾರಂಭವನ್ನು ಉದ್ಘಾಟಿಸಿ
ಮಾತನಾಡಿ ವಿದ್ಯಾರ್ಥಿಗಳು ತಮ್ಮ ಎರಡು ವರ್ಷಗಳಲ್ಲಿ ಶ್ರಮಪಟ್ಟು ಅಧ್ಯಯನ ನಡೆಸಿ ಉತ್ತಮ ಭವಿಷ್ಯ ರೂಪಿಸಬೇಕು ಎಂದರು. ಕೆವಿಜಿ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿ ಮೌರ್ಯ ಆರ್. ಕುರುಂಜಿ ಮಾತನಾಡಿ ನಿರ್ಧಿಷ್ಟ ಗುರಿಯೊಂದಿಗೆ ಶ್ರಮಪಟ್ಟು ಓದಿದರೆ ಉತ್ತಮ ಫಲಿತಾಂಶ ಪಡೆಯಬಹುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು.
ಎಒಎಲ್ಇ ಕಮಿಟಿ ಬಿ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ, ಕೆವಿಜಿ ಡೆಂಟಲ್ ಕಾಲೇಜಿನ ಆಡಳಿತಾಧಿಕಾರಿ ಮಾಧವ ಬಿ.ಟಿ, ಪ್ರಸನ್ನ ಕಲ್ಲಾಜೆ, ಕೆವಿಜಿ ಪವರ್ ಹೌಸ್ ಎಕ್ಸಿಕ್ಯುಟಿವ್ ಇಂಜಿನಿಯರ್ ವಸಂತ ಕಿರಿಭಾಗ ಸೇರಿದಂತೆ ವಿವಿಧ ವಿದ್ಯಾಸಂಸ್ಥೆಗಳ ಸಿಬ್ಬಂದಿಗಳು, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಾಗತ ನೃತ್ಯ, ಪ್ರಾರ್ಥನೆ ನಡೆಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್. ಸ್ವಾಗತಿಸಿ, ಉಪನ್ಯಾಸಕಿ ರತ್ನಾವತಿ ಬಿ ವಂದಿಸಿದರು. ವಿದ್ಯಾರ್ಥಿಗಳಾದ ವಂಶಿ ಪಿ.ಎಂ, ಸಾನ್ವಿ ಪಿ.ಎನ್, ಮಿಝಾ, ನಿಕೇತನ್ ಮತ್ತು ಉಪನ್ಯಾಸಕಿ ಮಲ್ಲಿಕಾ ಎಂ.ಎಲ್. ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
















