ಸುಳ್ಯ: ತಾಲೂಕಿನ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜು ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸತತ 6 ನೇ ಬಾರಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಪ್ರಜ್ಞಾ ಕೆ.ಸಿ ಹಾಗು ವಾಣೀಜ್ಯ ವಿಭಾಗದಲ್ಲಿ ಆಯಿಷಾ ಶಿಫಾನ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ
ಆಯಿಷಾ ಶಿಫಾನ
ಪ್ರಜ್ಞಾ ಕೆ.ಸಿ.
ಒಟ್ಟು ವಿಜ್ಞಾನ 48 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಪ್ರಜ್ನಾ ಕೆ.ಸಿ 581 ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನಿಯಾಗಿರುತ್ತಾರೆ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಆಯಿಷಾ ಶಿಫಾನ 590 ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನಿಯಾಗಿರುತ್ತಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ. ವಿ, ಟ್ರಸ್ಟಿ ಡಾ. ಜ್ಯೋತಿ ಅರ್. ಪ್ರಸಾದ್ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಪ್ರಾಂಶುಪಾಲೆ ಡಾ. ಯಶೋದ ರಾಮಚಂದ್ರ, ಉಪಪ್ರಾಂಶುಪಾಲ ದೀಪಕ್ ವೈ. ಆರ್, ಆಡಳಿತ ಪರಿಷತ್ ಸದಸ್ಯರು ಮತ್ತು ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ