ಸುಳ್ಯ: ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ಬಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಶುಭ ಹಾರೈಸಿದರು.ಸಂಸ್ಥೆಯ ಕಾರ್ಯನಿರ್ವಹಣಾಧಿಕಾ ಡಾ. ಉಜ್ವಲ್ ಯು ಜೆ ಯೋಗ ದಿನಾಚರಣೆಗೆ ಚಾಲನೆ ನೀಡಿದರು ಹಾಗೂ
ಯೋಗದ ಮಹತ್ವವನ್ನು ಹಾಗೂ ವಿಶ್ವದಾದ್ಯಂತ ಯೋಗ ಪಸರಿಸಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಮತ ಎಂ ಜೆ ಅವರು ಆಗಮಿಸಿದ್ದರು. ಅವರು ವಿದ್ಯಾರ್ಥಿಗಳಿಗೆ ಯೋಗಭ್ಯಾಸದ ಮಹತ್ವವನ್ನು ವಿವರಿಸಿ, ವಿವಿಧ ಆಸನಗಳನ್ನು ಮಾಡಿಸಿದರು.ವಿದ್ಯಾರ್ಥಿನಿ ವೈಷ್ಣವಿ ಸಹಕರಿಸಿದರು.
ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು