ಸುಳ್ಯ:ಸುಳ್ಯ ತಾಲೂಕು ನಾಡ ಹಬ್ಬಗಳ ದಿನಾಚರಣಾ ಸಮಿತಿಯ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಜಿ.ಮಂಜುನಾಥ್ ಅಂಬೇಡ್ಕರ್ ಭಾವಚಿತ್ರಕ್ಕೆ
ಪುಷ್ಪಾರ್ಚನೆ ಮಾಡಿ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್, ತಾಲೂಕು ಆರೋಗ್ಯಾಧಿಕಾರಿ, ಡಾ.ನಂದಕುಮಾರ್, ತಹಶೀಲ್ದಾರ್ ಗ್ರೇಡ್ 2 ಎಂ.ಮಂಜುನಾಥ್ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.