ಸುಳ್ಯ:ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಬಂಟರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ತಾಲೂಕು ಕೇಂದ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಶೀಘ್ರ
ಪೂರ್ಣಗೊಂಡು ಮುಂದಿನ ವರ್ಷದ ಅಂಬೇಡ್ಕರ್ ಜಯಂತಿ ನೂತನ ಅಂಬೇಡ್ಕರ್ ಭವನದಲ್ಲೇ ಆಚರಣೆ ಮಾಡುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಕ್ಷೇತ್ರದ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಆಶಾಲತಾ ಪಿ ಉಪನ್ಯಾಸ ನೀಡಿ ಸಮಾಜದಲ್ಲಿ ಜಾತಿ,ಧರ್ಮ, ಲಿಂಗ ಆಧಾರಿತ ತಾರತಮ್ಯ ಹೋಗಲಾಡಿಸಿ ಎಲ್ಲರೂ ಒಂದಾಗಿ ಬದುಕಿದರೆ ಅಂಬೇಡ್ಕರ್ ಅವರ ಆಶಯ ಸಾರ್ಥಕವಾಗಿ ಅವರ ಜಯಂತಿ ಆಚರಣೆ ಇನ್ನಷ್ಟು ಅರ್ಥ ಪೂರ್ಣವಾಗಲು ಸಾಧ್ಯ ಎಂದರು.
ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ , ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ,ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ , ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ನಗರ ಪಂಚಾಯತ್ ಉಪಾಧ್ಯಕ್ಷ ಬುದ್ಧ ನಾಯ್ಕ್, ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್, ಸದಸ್ಯರಾದ ಬಾಲಕೃಷ್ಣ ಭಟ್, ಎಂ. ವೆಂಕಪ್ಪ ಗೌಡ, ಶೀಲಾ ಅರುಣ ಕುರುಂಜಿ, ಧೀರಾ ಕ್ರಾಸ್ತಾ, ನಾರಾಯಣ ಶಾಂತಿನಗರ, ಸುಶೀಲ ಜಿನ್ನಪ್ಪ, ಶಿಲ್ಪಾ ಸುದೇವ್, ಸುಧಾಕರ ಕುರುಂಜಿಬಾಗ್, ರಿಯಾಝ್ ಕಟ್ಟೆಕ್ಕಾರ್, ರಾಜು ಪಂಡಿತ್,
ತಹಶೀಲ್ದಾರ್ ಮಂಜುಳಾ ಎಂ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ , ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ , ಸಮಾಜ ಕಲ್ಯಾಣ

ಇಲಾಖೆಯ ಸಹಾಯಕ ನಿರ್ದೇಶಕಿ ಜಿ.ಕೆ ಉಮಾದೇವಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಹೆಚ್ ಸುಧಾಕರ, ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಪ್ರಮುಖರಾದ ಚನಿಯ ಕಲ್ತಡ್ಕ, ಶಂಕರ ಪೆರಾಜೆ, ಶೀನಪ್ಪ ಬಯಂಬು, ಅಚ್ಚುತ ಮಲ್ಕಜೆ, ನಂದರಾಜ ಸಂಕೇಶ್, ಆನಂದ ಬೆಳ್ಳಾರೆ, ಸರಸ್ವತಿ ಬೊಳಿಯಮಜಲು, ಕರುಣಾಕರ ಪಲ್ಲತ್ತಡ್ಕ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಮತ ಕೆ ಸ್ವಾಗತಿಸಿ ಮಮತ ಎಸ್.ಕೆ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಕೃಷ್ಣ ವಂದಿಸಿದರು.
ಸಭಾ ಕಾರ್ಯಕ್ರಮಕ್ಕೆ ಮುನ್ನ ನಗರದಲ್ಲಿ ಆಕರ್ಷಕ ಮೆರವಣಿಗೆ ನಡೆಯಿತು.