ಸುಳ್ಯ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢ ಶಾಲೆಯ ಅನಘ ಕೆ.ಸಿ.608 ಅಂಕ ಪಡೆದಿದ್ದಾರೆ.
ಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 42 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ. 8 ವಿದ್ಯಾರ್ಥಿಗಳು
ಡಿಸ್ಟಿಂಕ್ಷನ್ನಲ್ಲಿ 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ತನುಜ್ಞ(595) ಅಂಕ ಪಡೆದಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ದ.ಕ.ಗೌರವ. ವಿದ್ಯಾಸಂಘದ ಅಧ್ಯಕ್ಷ, ಧನಂಜಯ ಅಡ್ಪಂಗಾಯ, ಕಾರ್ಯದರ್ಶಿ ಡಾ.ರೇವತಿ ನಂದನ್ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.