ಬೆಂಗಳೂರು: ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ ಆನಂದ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ
ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.ಕೇವಲ ರಾಜಕೀಯ ಕ್ಷೇತ್ರವಲ್ಲದೆ, ಆನಂದ್ ಮಾಮಿನಿ ಅವರು ಅನೇಕ ಸಮಾಜ ಸೇವೆಯಲ್ಲಿಯೂ ತೊಡಗಿಸಿಕಡಿದ್ದರು. ಶ್ರೀ ಚಂದ್ರಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸವದತ್ತಿ ಅಧ್ಯಕ್ಷರಾಗಿದ್ದರು.2000 ರಿಂದ 2002ರ ವರೆಗೆ ಪ್ರಾಥಮಿಕ ಸರಕಾರಿ ಕೃಷಿ ಮತ್ತು ಅಭಿವೃದ್ಧಿ ಬ್ಯಾಂಕ್, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಯಲ್ಲಮ್ಮನಗುಡ್ಡ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಎಜುಕೇಶನ್ ಸೊಸೈಟಿ, ಸೌದತ್ತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿ, 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್ ವಿಜಯ ಸಾಧಿಸಿದರು. ಪ್ರಸ್ತುತ ವಿಧಾನಸಭಾ ಉಪಸಭಾಧ್ಯಕ್ಷರಾಗಿದ್ದರು.ಲ್ಲಮ್ಮನಗುಡ್ಡ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಎಜುಕೇಶನ್ ಸೊಸೈಟಿ ಸದಸ್ಯರಾಗಿ ಕೆಲಸ ಮಾಡಿದ್ದರು. ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದರು.
ಆನಂದ ಮಾಮನಿ ಅವರು ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.