ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಕನ್ನಡದ ಹಿರಿಯ ನಟ ಅನಂತನಾಗ್ ಭಾಜನರಾಗಿದ್ದಾರೆ.
2024ನೇ ಸಾಲಿನ ಈ ಗೌರವಕ್ಕೆ ಅನಂತನಾಗ್ ಅವರನ್ನು ಆಯ್ಕೆ ಮಾಡಲಾಗಿದ್ದು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಕುರಿತು ಅಧಿಕೃತವಾಗಿ ಘೋಷಿಸಿದೆ. ಐದು ದಶಕಗಳಿಗೂ
ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅನಂತನಾಗ್ ಅವರು ಕನ್ನಡ, ಹಿಂದಿ, ಮರಾಠಿ ಸೇರಿದಂತೆ ಹಲವು ಭಾಷೆಗಳ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.ಸೆ22ವರಂದು ಗುಜರಾತ್ನ ಏಕತಾ ನಗರದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತನಾಗ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.ಡಾ. ರಾಜ್ಕುಮಾರ್ ಅವರ ಬಳಿಕ ಈ ಅತ್ಯುನ್ನತ ಗೌರವಕ್ಕೆ ಭಾಜನರಾದ ಮತ್ತೊಬ್ಬ ಕನ್ನಡಿಗ ಎಂಬ ಕೀರ್ತಿಗೂ ಅನಂತ್ ನಾಗ್ ಪಾತ್ರರಾಗಿದ್ದಾರೆ.











