ಕಾಸರಗೋಡು: ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪ ಅನಂತಪುರದ ಕೖಗಾರಿಕಾ ಪ್ರಾಂಗಣದ ಪ್ವೖವುಡ್ ಕಾರ್ಖಾನೆಯಲ್ಲಿ ಭಾರೀ ಸ್ಪೋಟ ಸಂಭವಿಸಿದೆ.ಇಂದು ಸಂಜೆ ಸುಮಾರು ಏಳರ ವೇಳೆಗೆ ಭಾರೀ ಸ್ಪೋಟ ಸಂಭವಿಸಿದ್ದು, ಪರಿಸರವಿಡೀ ಕಂಪಿಸಿದ ಅನುಭವ ಉಂಟಾಗಿದೆ. ಘಟನೆಯಲ್ಲಿ
ಓರ್ವ ಕಾರ್ಮಿಕ ಮೃತಪಟ್ಟಿದ್ದು ಹಲವು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸಹಾಯದಿಂದ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಈ ದುರಂತ ಉಂಟಾಗಿದೆ ಎಂದು ಶಂಕಿಸಲಾಗಿದೆ. ಸ್ಪೋಟದ ಪರಿಣಾಮ ಪರಿಸರದ ಅನೇಕ ಮನೆಗಳ ಗಾಜಿಗೆ ಹಾನಿಯಾಗಿವೆ. ಕಾರ್ಖಾನೆ ಪರಿಸರದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿದಲಾಗಿದೆ.















