ಸುಳ್ಯ: ಅಂಗನವಾಡಿ ಕಾರ್ಯಕರ್ತರ ಗೌರವ ಧನ ಬಹಳ ಕಡಿಮೆ ಇದೆ. ಅವರಿಗೆ ಕೆಲಸ ಜಾಸ್ತಿ ಇದೆ. ಆದುದರಿಂದ ಅಂಗನವಾಡಿ ಕಾರ್ಯಕರ್ತರ ಗೌರವಧನವನ್ನು ಹೆಚ್ಚಿಸಬೇಕು ಎಂದು
ಶಾಸಕಿ ಭಾಗೀರಥಿ ಮುರುಳ್ಯ ಆಗ್ರಹಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಅವರು ಮಾತನಾಡಿದರು. ಅಂಗನವಾಡಿ ಕಾರ್ಯಕರ್ತರ ಸಂಬಳ ಹೆಚ್ಚಿಸಬೇಕು ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹೊಸ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುಸದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.