ಸುಳ್ಯ: ಸುಳ್ಯದ ಅಂಬೆಟಡ್ಕದ ಅಡ್ಕಾರ್ ಆರ್ಕೆಡ್ನಲ್ಲಿ ಕಾರ್ಯಚರಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಜಲಿ ಮೊಂಟೆಸ್ಸರಿ ಸ್ಕೂಲ್ನ ಅಧ್ಯಕ್ಷ ಶುಭಕರ್ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಸುಳ್ಯದ ಕೆವಿಜಿ ಆರ್ಯುವೇದ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ. ವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು.
ಪುಟಾಣಿ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವೇಷ ತೊಟ್ಟು ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು.
ಮಾನ್ಹಾ ಹಾಗೂ ಸಾದ್ವಿನಿ ದಿನಾಚರಣೆಯ ಕುರಿತು ಮಾತನಾಡಿದರು.
ಶಾಲೆಯಲ್ಲಿ ಏರ್ಪಡಿಸಿದ ಸ್ಮರ್ಧೆಗಳಿಗೆ ಬಹುಮಾನ ವಿತರಿಸಲಾಯಿರು. ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕಿ ಗೀತಾಂಜಲಿ ಟಿ.ಜಿ.ವೇದಿಕೆಯಲ್ಲಿದ್ದರು. ಶಾಲಾ ಶಿಕ್ಷಕ ವೃಂದ ಸಹಕರಿಸಿದರು.