ಬೆಂಗಳೂರು:ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ‘ಇಂದಿರಾ ಆಹಾರ ಕಿಟ್’ ನೀಡಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಕುಟುಂಬ ಸದಸ್ಯರಿಗೆ ತಲಾ 5 ಕೆಜಿ ಅಕ್ಕಿ ಜತೆಗೆ ಕುಟುಂಬಕ್ಕೆ ಒಂದು ಆಹಾರ ಕಿಟ್ ಸಿಗಲಿದೆ.ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಕುಟುಂಬದ
ತಲಾ ಒಬ್ಬರಿಗೆ 10 ಕೆಜಿ ಅಕ್ಕಿ ಘೋಷಣೆ ಮಾಡಿತ್ತು. ಆರಂಭದಲ್ಲಿ ಅಕ್ಕಿ ದಾಸ್ತಾನು ಲಭ್ಯವಿಲ್ಲ ಎಂದು 10 ಕೆಜಿ ಪೈಕಿ 5 ಕೆಜಿ ಅಕ್ಕಿ ನೀಡಿ, ಉಳಿದ 5 ಕೆಜಿ ಅಕ್ಕಿಯ ಹಣವನ್ನು ಫಲಾನುಭವಿ ಕುಟುಂಬದ ಯಜಮಾನರ ಖಾತೆಗೆ ಜಮೆ ಮಾಡುತ್ತಿತ್ತು. ಆ ಬಳಿಕ ಅಕ್ಕಿ ದಾಸ್ತಾನು ಲಭ್ಯವಾದ ಹಿನ್ನೆಲೆ ತಲಾ 10 ಕೆಜಿ ನೀಡುತ್ತಿತ್ತು. ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ.’ಇಂದಿರಾ ಆಹಾರ ಕಿಟ್’ ಈ ಕಿಟ್ನಲ್ಲಿ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಮತ್ತು 5 ಕೆಜಿ ಅಕ್ಕಿ ಇರಲಿದೆ ಎಂದು ಸರಕಾರ ಹೇಳಿದೆ.












