ಬೆಂಗಳೂರು:ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು. ಐದು ಕೆಜಿ ಅಕ್ಕಿ ಜತೆಗೆ ಉಳಿದ 5 ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ
ಆಗಲಿದ್ದು ಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿ ಲೋಗೋ ಕೂಡ ಬಿಡುಗಡೆ ಮಾಡಿದರು. ಬಳಿಕ
ಮಾತನಾಡಿದ ಸಿದ್ದರಾಮಯ್ಯ, ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ. ರಾಜ್ಯ ಸರಕಾರ ಮೊದಲ ಸಂಪುಟದಲ್ಲೇ ಐದು ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದ್ದೆವು. ನಮ್ಮ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಯೋಜನೆ. ರಾಜ್ಯದ 1.28 ಕೋಟಿ ಕುಟುಂಬಕ್ಕೆ ಅನ್ನಭಾಗ್ಯ ಯೋಜನೆ ತಲುಪುತ್ತದೆ. ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ ಎಂದಿದ್ದಾರೆ.
ಅಂತ್ಯೋದಯ,ಬಿಪಿಎಲ್ ಕಾರ್ಡ್ದಾರರು ಸೇರಿ 4.42 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದರು.